ಪಂಚ ಗ್ಯಾರಂಟಿ ಬಂಟ್ವಾಳ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

0

ಪರಿಸಂರಕ್ಷಣೆಯಲ್ಲಿ ಸ್ಥಳೀಯ ಸಂಸ್ಥೆಗಳು ಮುಖ್ಯ ಪಾತ್ರ ವಹಿಸಬೇಕು : ಜಯಂತಿ ವಿ.ಪೂಜಾರಿ
ಪರಿಸರ ರಕ್ಷಣೆ ನಮ್ಮ ಹೊಣೆ : ಸಚಿನ್ ಕುಮಾರ್

ವಿಟ್ಲ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು, ತಾಲೂಕು ಪಂಚಾಯತ್ ಬಂಟ್ವಾಳ ವತಿಯಿಂದ ಇರ್ವತ್ತೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಪಂಚ ಗ್ಯಾರಂಟಿ ಸದಸ್ಯರಾದ ಸುದೀರ್ ಶೆಟ್ಟಿ ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಕೊಳಲಬಾಕಿಮಾರು ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ಮಾತನಾಡಿ ಪರಿಸರ ರಕ್ಷಣೆ ನಮ್ಮೆಲ್ಲರ ಹೋಣೆ,ಪ್ರತಿ‌ ಮನೆಯಲ್ಲಿ ವನಮಹೋತ್ಸವ ನಡೆಯಬೇಕು,ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಸಂಘ ಸಂಸ್ಥೆಗಳು ತಮ್ಮ ಸುತ್ತ ಮುತ್ತಲಿನ ಪರಿಸರಲ್ಲಿ ಗಿಡ ನೆಟ್ಟು ಪರಿಸರದ ರಕ್ಷಣೆ ಮಾಡಬೇಕು,ಪಂಚ ಗ್ಯಾರಂಟಿ ವತಿಯಿಂದ ಇನ್ನಷ್ಟು ಕಾರ್ಯಕ್ರಮಗಳನ್ನು ಅಯೋಜನೆ ಮಾಡಲಾಗುವುದು ಎಂದರು.

ಬಂಟ್ವಾಳ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ರವರು ಕಾರ್ಯಕ್ರಮವನ್ನು‌ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಹರ್ಸನ್,ಚಂದ್ರಶೇಖರ್ ಆಚಾರ್ಯ,ಇರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ,ಸದಸ್ಯರಾದ ದಯಾನಂದ ನಾಯ್ಕ್, ವಿಜಯ, ಪ್ರಶಾಂತ ಜೈನ್, ಚೆನೈತ್ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಬಿ.ಆರ್., ಕೊಳಲಬಾಕಿಮಾರು ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವಿಮಲಾ, ಪ್ರಮುಖರಾದ ಕೊರಗಪ್ಪ ಶೆಟ್ಟಿ, ಬಾಲಕೃಷ್ಣ ಅಂಚನ್,ಮಂಜುನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ವನಮಹೋತ್ಸವ ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ರಾಜೇಶ ಕೆ, ಸ್ವಾಗತಿಸಿದರು, ಅತಿಥಿ ಶಿಕ್ಷಕಿಯಾದ ನಿಕಿತಾ ರವರು ವಂದಿಸಿದರು.

LEAVE A REPLY

Please enter your comment!
Please enter your name here