ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

0

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ ಜು.26ರಂದು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಎಲ್ಲಾ ಅತಿಥಿಗಳು ಭಾರತ ಮಾತೆಯ ಭಾವಚಿತ್ರಕ್ಕೆ ಗೌರವ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ವಹಿಸಿ ದೇಶ ಸೇವೆ ಹಾಗೂ ಯೋಧರ ಬಲಿದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಮುಖ್ಯ ಅತಿಥಿ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್ ಮಾತನಾಡಿ, ಯೋಧರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದು ದೇಶದ ಭದ್ರತೆಗಾಗಿ ನಾವು ಅವರ ಬಲಿದಾನವನ್ನು ಎಂದೆಂದಿಗೂ ಸ್ಮರಿಸಬೇಕು ಎಂದು ಶುಭ ನುಡಿದರು.

ಈ ಕಾರ್ಯಕ್ರಮದಲ್ಲಿ ಅಕ್ಷಯ ಪಿಯು ಕಾಲೇಜು ಪ್ರಾಂಶುಪಾಲೆ ಗಂಗರತ್ನ ,ಉಪ ಪ್ರಾಂಶುಪಾಲೆ ರಕ್ಷಣಾ  ಟಿ ಆರ್, ಆಂತರಿಕ ಗುಣಮಟ್ಟದ ಸಂಯೋಜಕಿ ರಶ್ಮಿ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಮೇಘಶ್ರೀ ಉಪಸ್ಥಿತರಿದ್ದರು. ಅಕ್ಷಯ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿ.  ಕನ್ನಡ ವಿಭಾಗದ ಮುಖ್ಯಸ್ಥ ಹರಿಶ್ಚಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here