ಅಮರ್ ಜವಾನ್ ಸ್ಮಾರಕ ಜ್ಯೋತಿಗೆ ಗೌರವ ವಂದನೆ
ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು. ಅಂಬಿಕಾ ಸಮೂಹ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡಿರುವ ಅಮರ್ ಜವಾನ್ ಸ್ಮಾರಕ ಜ್ಯೋತಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಮುಖ್ಯ ಅತಿಥಿಯಾಗಿ IPDRR ರಾಹುಲ್ ಆಚಾರ್ಯ ಅವರು, 1999ರ ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ವೀರ ಯೋಧರನ್ನು ಸ್ಮರಿಸಿದರು. ಪುತ್ತೂರು ರೋಟರಾಕ್ಟ್ ಕ್ಲಬ್ ಅಧ್ಯಕ್ಷ ವಿನೀತ್, ಕಾರ್ಯದರ್ಶಿ ನವನೀತ್, ನವೀನ್ ಚಂದ್ರ, ಕಿಶೋರ್, ವಿಶಾಲ್, ಹರ್ಷಿತ್ ಆಚಾರ್ಯ ಉಪಸ್ಥಿತರಿದ್ದರು.