ಪುತ್ತೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಒಕ್ಕಲಿಗ ಗೌಡ ಮಹಿಳಾ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ʼಆಟಿ ಹಬ್ಬ-2025ʼ ಕಾರ್ಯಕ್ರಮಕ್ಕೆ ಜು.27ರಂದು ಬೆಳಗ್ಗೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಹೊನ್ನಮ್ಮ ಬೇರಿ ಕೆ. ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಚಂದ್ರಶೇಖರ ಪೆರಾಲು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಮಹಿಳಾ ಗೌಡ ಸಂಘದ ಅಧ್ಯಕ್ಷೆ ವಾರಿಜ ಕೆ ಗೌಡ ಸಹಿತ ಸಂಘದ ಪ್ರಮುಖರು ಉಪಸ್ಥಿತರಿದ್ದರು.