ಪುತ್ತೂರು: ಭಾರತೀಯ ಜನತಾ ಪಾರ್ಟಿ, ಯುವ ಮೋರ್ಚಾ ಪುತ್ತೂರು ನಗರ,ಗ್ರಾಮಾಂತರ ಮಂಡಲಗಳ ವತಿಯಿಂದ ಕಾರ್ಗಿಲ್ ವಿಜಯದ ದಿನದ ಅಂಗವಾಗಿ ನಿವೃತ್ತ ಮಾಜಿ ಸೈನಿಕರಾದ ಶ್ರೀ.ವಿಜಯ್ ಕುಮಾರ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ನಿತೇಶ್ ಕಲ್ಲೇಗ, ಯುವಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಶಿಶಿರ್ ಪೆರ್ವೋಡಿ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಗಳಾದ ವಿರೂಪಾಕ್ಷ ಭಟ್ ಮಚ್ಚಿಮಲೆ ಯುವ ಮೋರ್ಚಾ ನಗರ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾದ ಸುಮಿತ್ ಭಟ್, ಪವನ್ ಶೆಟ್ಟಿ ಕಾರ್ಯದರ್ಶಿ ಪ್ರಜ್ವಲ್ ಮತ್ತು ಯುವ ಮೋರ್ಚಾ ಕಾರ್ಯಕರ್ತರು ಉಪಸ್ಥಿತಿ ಇದ್ದರು.