ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜು.29ರಂದು ನಾಗರ ಪಂಚಮಿ ಮಹೋತ್ಸವ ಸಾರ್ವಜನಿಕ ಆಶ್ಲೇಷ ಬಲಿಪೂಜೆ ನಡೆಯಲಿದೆ.
ಬೆಳಗ್ಗೆ ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ಅಭಿಷೇಕ, ಆರಾಧ್ಯ ದೇವರಿಗೆ ಮಹಾಪೂಜೆ, ಶ್ರೀ ಗಣಪತಿ ಹವನ, ಬಳಿಕ ಸಾಮೂಹಿಕ ಆಶ್ಲೇಷ ಬಲಿಪೂಜೆ ಆರಂಭಗೊಳ್ಳಲಿದೆ. ಮಧ್ಯಾಹ್ನ 11.30ರಿಂದ ಶ್ರೀಗಳವರು ನಾಗರ ಪಂಚಮಿಯ ಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಕಲ್ಲೋಕ್ತ ಪೂಜೆ, ಮಹಾಪೂಜೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಹಾಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮ ಯಜ್ಞ ಯಕ್ಷ ಅಭಿಯಾನ ಸಮಿತಿ ಮಂಗಳೂರು ಇವರಿಂದ ಡಿ. ಮನೋಹರ ಕುಮಾರ್ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ‘ಶ್ರೀ ರಾಮ ಪಟ್ಟಾಭಿಷೇಕ’ ಯಕ್ಷಗಾನ ಬಯಲಾಟ ನಡೆಯಲಿದೆ.
ರಾತ್ರಿ ಭಜನೆ, ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.