ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.4 ರಂದು ಬೆಳಿಗ್ಗೆ ಕೆದಂಬಾಡಿ ಗ್ರಾಮ ಪಂಚಾಯತಿನ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪುತ್ತೂರು ಇದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಸಭೆ ನಡೆಸಿಕೊಡಲಿದ್ದಾರೆ.
ನಾಳೆ ವಾರ್ಡ್ ಸಭೆ
ವಾರ್ಡ್ ಸಭೆಗಳು ಜು.28ರಂದು ನಡೆಯಲಿದೆ. ಗ್ರಾಮ ಪಂಚಾಯಿತಿನ 1 ಮತ್ತು 2 ನೇ ವಾರ್ಡಿನ ವಾರ್ಡ್ ಸಭೆಯು ಸ.ಹಿ.ಪ್ರಾ ಶಾಲೆ ಕೆದಂಬಾಡಿ ಇಲ್ಲಿ ಬೆಳಿಗ್ಗೆ 10.30 ಮತ್ತು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. 3 ಮತ್ತು 4 ನೇ ವಾರ್ಡಿನ ವಾರ್ಡ್ ಸಭೆಯು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಪರಾಹ್ನ 3 ಗಂಟೆಗೆಮತ್ತು 4 ಗಂಟೆಗೆ ನಡೆಯಲಿದೆ. ವಾರ್ಡ್ ಸಭೆಗೆ ಮತ್ತು ಗ್ರಾಮ ಸಭೆಗೆ ಗ್ರಾಮದ ಮತದಾರ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರದ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸುವಂತೆ ಹಾಗೆ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಮುಳಿಗದ್ದೆ , ಉಪಾಧ್ಯಕ್ಷೆ ಜಯಲಕ್ಷ್ಮಿ ಬಲ್ಲಾಲ್ ಕೆದಂಬಾಡಿಬೀಡು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ,ಪ್ರಭಾರ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.