ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಪ್ರಖ್ಯಾತ್ ಎನ್.ಸಿ, ಉಪಾಧ್ಯಕ್ಷರಾಗಿ ಪ್ರಥಮ ವಾಣಿಜ್ಯ ವಿಭಾಗದ ರಾಜೀವ ಪಿ, ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಕಶ್ವಿ ರೈ, ಕ್ರೀಡಾ ಕಾರ್ಯದರ್ಶಿಯಾಗಿ ದ್ವಿತೀಯ ಕಲಾವಿಭಾಗದ ಹಿತೇಶ್ ಎನ್.ಕೆ, ಸಹ ಕ್ರೀಡಾ ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಲಯಶ್ರೀ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ತರುಣ್ ಹೆಚ್.ಎಸ್, ಸಹ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಶ್ರೇಯ, ರಾಷ್ಟ್ರೀಯ ಸೇವಾ ಯೋಜನೆಯ ನಾಯಕರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತ್ ರೈ ಮತ್ತು ರಕ್ಷಾ ಜೆ ರೈ ಆಯ್ಕೆಯಾದರು.
ಆಯ್ಕೆಯಾದ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ತರಗತಿ ಪ್ರತಿನಿಧಿಗಳಿಗೆ ಪ್ರಾಂಶುಪಾಲರು ಶುಭ ಹಾರೈಸಿದರು. ಉಪನ್ಯಾಸಕರಾದ ಶಿವಪ್ರಸಾದ್ ಪಿ ಮತ್ತು ಲೋಹಿತ್ ಕೆ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.