
ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿ ಮಹಾಸಭೆಯಲ್ಲಿ ಹಲವಾರು ವರ್ಷಗಳಿಂದ ವಲಯ ಹಾಗೂ ಕ್ಷೇತ್ರ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದ ದ.ಕ ಜಿಲ್ಲಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಜಯಂತ ಉರ್ಲಾಂಡಿ ದಂಪತಿ ಹಾಗೂ ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಜಯರಾಮ ಬಿ.ಎನ್ ದಂಪತಿಯನ್ನು ಶಾಲು ಹಾರ, ಪೇಟ, ಹಣ್ಣು ಹಂಪಲು ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಪುತ್ತೂರು ಕ್ಷೇತ್ರ ಸಮಿತಿ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು, ದ.ಕ ಜಿಲ್ಲಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.