ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

0

ಕಡಬ: ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಕಡಬ ತಾಲೂಕಿನ ಕುಂತೂರಿನ ಯುವತಿಯೋರ್ವರು ಜು.28ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.


ಕುಂತೂರು ಗ್ರಾಮದ ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಎಂಬವರ ಪುತ್ರಿ ಶ್ವೇತಾ(23ವ.) ಮೃತಪಟ್ಟ ದುರ್ದೈವಿ ಯುವತಿ. ಪದವೀಧರೆಯಾಗಿದ್ದ ಈಕೆ ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆರಂಭದಲ್ಲಿ ಜ್ವರ ಕಾಣಿಸಿಕೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಕಿಡ್ನಿ ಸಂಬಂಧಿತ ಖಾಯಿಲೆ ವಾಸಿಯಾಗಿರಲಿಲ್ಲ. ಜು.28ರಂದು ಬೆಳಿಗ್ಗೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಮನೆಯವರು ಆಲಂಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಅವರು ಅಲ್ಲಿ ಕುಸಿದು ಬಿದಿದ್ದು, ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಕೊನೆಯುಸಿರೆಳೆದಿದ್ದರು. ಮೃತ ಯವತಿ ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here