ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಈಸ್ಟ್ ಹಾಗೂ ಅಕ್ಷಯ ಕಾಲೇಜು ಪುತ್ತೂರು ಇದರ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವು ಜು.30 ರಂದು ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಜರಗಲಿದೆ.
ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಶಶಿಧರ್ ಕಿನ್ನಿಮಜಲುರವರು ವಹಿಸಿಕೊಳ್ಳಲಿದ್ದಾರೆ. ಅಕ್ಷಯ ಸಮೂಹ ಸಂಸ್ಥೆಗಳ ಚೇರ್ಮನ್ ಜಯಂತ್ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಸುಬ್ಬಯ್ಯ ನಾಯ್ಕ್, ಪುತ್ತೂರು ರೇಂಜ್ ಫಾರೆಸ್ಟ್ ಆಫೀಸರ್ ಕಿರಣ್ ಬಿ.ಎಂ, ರೋಟರಿ ವಲಯ ಐದರ ಅಸಿಸ್ಟೆಂಟ್ ಗವರ್ನರ್ ಪ್ರಮೀಳಾ ರಾವ್, ಗೌರವ ಅತಿಥಿಗಳಾಗಿ ಅಕ್ಷಯ ಕಾಲೇಜು ಪ್ರಾಂಶುಪಾಲ ಸಂಪತ್ ಕೆ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಅಕ್ಷಯ ಪಿಯು ಕಾಲೇಜು ಪ್ರಾಂಶುಪಾಲ ಗಂಗಾರತ್ನ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಕಮ್ಯೂನಿಟಿ ಸರ್ವಿಸ್ ನಿರ್ದೇಶಕ ಅಬ್ಬಾಸ್ ಮುರರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಈಸ್ಟ್ ಕಾರ್ಯದರ್ಶಿ ನವೀನ್ ರೈ ಪಂಜಳ, ಅಕ್ಷಯ ಕಾಲೇಜು ಐಕ್ಯೂಎಸಿ ಸಂಯೋಜಕಿ ರಶ್ಮಿ ಕೆ, ಎನ್.ಎಸ್.ಎಸ್ ಯೂನಿಟ್-2 ಪ್ರೋಗ್ರಾಮ್ ಆಫೀಸರ್ ಮೇಘಶ್ರೀ, ಯೂನಿಟ್-1 ಪ್ರೋಗ್ರಾಂ ಆಫೀಸರ್ ರಾಕೇಶ್ ಕೆ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.