ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಸೋಮವಾರ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ದೇವಾಲಯದ ಸಾನ್ನಿಧ್ಯ ವೃದ್ಧಿ ಹಾಗೂ ಊರಿನ ಶ್ರೇಯೋಭಿವೃದ್ಧಿಗಾಗಿ ಶ್ರೀ ಮಹಾಗಣಪತಿ ದೇವರಿಗೆ ಗಣಪತಿ ಹವನ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ವೇ.ಮೂ. ಹರೀಶ ಉಪಾಧ್ಯಾಯ ಅವರು ವೈದಿಕ ವಿಧಿ-ವಿಧಾನ ನೆರವೇರಿಸಿದರು. ಪ್ರತಿ ತಿಂಗಳ ಹುಣ್ಣಿಮೆಯ ಎದುರಿನ ಚೌತಿಯಂದು ಗಣಪತಿ ಹವನವು ಇಲ್ಲಿ ನಡೆಯಲಿದೆ. ಈ ಸಂದರ್ಭ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ರಾಧಾಕೃಷ್ಣ ನಾೖಕ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.