ಕಾಣಿಯೂರು : ಅಗಳಿ ಶ್ರೀ ಸದಾಶಿವ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಕ್ಷೀರಾಭಿಷೇಕ, ತಂಬಿಲ ಸೇವೆ ಜು.29ರಂದು ನಡೆಯಿತು.
ದೇವಸ್ಥಾನದ ಅರ್ಚಕ ಈಶ್ವರಚಂದ್ರ ಭಟ್ ಇವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ರೈ ಮಾದೋಡಿ ಹಾಗೂ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.