ಪುತ್ತೂರು: ಅಂತರ್ರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಡಿ, ರೀಜನ್ 7, ವಲಯ ಎರಡರ ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ವತಿಯಿಂದ 98 ವರ್ಷಗಳ ಇತಿಹಾಸವುಳ್ಳ ಬೊಳ್ವಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ವನಮಹೋತ್ಸವವನ್ನು ಆಚರಿಸಲಾಗಿದ್ದು ಬಳಿಕ ಮಕ್ಕಳಿಗೆ ಸಸಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಅಧ್ಯಕ್ಷ ಅಂತೋನಿ ಒಲಿವೆರಾ, ಕಾರ್ಯದರ್ಶಿ ಲೀನಾ ಮಚಾದೋ, ನಿಶಾ ಮಿನೇಜಸ್, ಲೀನಾ ರೇಗೋ, ಶಾಲೆಯ ಮುಖ್ಯ ಶಿಕ್ಷಕಿ ಮೋನಿಕಾ ಮಾಡ್ತಾ, ಸಹ ಶಿಕ್ಷಕಿ ಮಲ್ಲಿಕಾ ಹಾಗೂ ಭಾರತಿ, ಶಾಲೆಯ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರೇಷ್ಮಾ ಉಪಸ್ಥಿತರಿದ್ದರು.
