ಕಾಣಿಯೂರು: ಶ್ರೀ ಕಾಣಿಯೂರು ರಾಮತೀರ್ಥ ಮಠದ ಶ್ರೀ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಕ್ಷೀರಾಭಿಷೇಕ, ತಂಬಿಲ ಸೇವೆ ಜು 29ರಂದು ನಡೆಯಿತು. ಅರ್ಚಕ ಜಗನಾಥ್ ಭಟ್ ಕಲ್ಪಡರವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕರು ಶ್ರೀನಿಧಿ ಆಚಾರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.