ಅರಿಯಡ್ಕ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೌಡಿಚ್ಚಾರು ಅರಿಯಡ್ಕ ಇದರ ವತಿಯಿಂದ 31ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು.27ರಂದು ಶ್ರೀ ಕೃಷ್ಣ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಜ್ಯೋತಿಷಿ ಮದ್ಲ ಭಾಸ್ಕರ ಬಲ್ಯಾಯ ಬಿಡುಗಡೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ರಾಮದಾಸ್ ರೈ ಮದ್ಲ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗೌಡ ಕನ್ನಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ರೈ ಕುತ್ಯಾಡಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು. ತಿಲಕ್ ರೈ ಕುತ್ಯಾಡಿ ಸ್ವಾಗತಿಸಿ ವಂದಿಸಿದರು.
