ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜು.29 ರಂದು ನಾಗರ ಪಂಚಮಿಯು ಭಕ್ತರ ಕೂಡುವಿಕೆಯಿಂದ ಶ್ರದ್ಧಾಭಕ್ತಿಯಿಂದ ನೆರವೇರಿತು.
ಅರ್ಚಕರಾದ ವೆಂಕಟೇಶ್ ಭಟ್ ಯೋಗೀಶ್ ಭಟ್ ಹಾಗೂ ರಮೇಶ್ ಭಟ್ ರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ತಂಬಿಲ ಸೇವೆ, ತದ ನಂತರ ಮಹಾಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ಸದಸ್ಯರಾದ ವಸಂತ ಕುಮಾರ್ ನಾಯ್ಕ, ಮಹೇಶ್ ಬಿ, ಲಲಿತಾ ಕೆ, ರೇಖಾ ಬಿ.ಎಸ್, ಸೂರಪ್ಪ ಗೌಡ, ಚಂದ್ರಶೇಖರ್ ಕಲ್ಲಗುಡ್ಡೆ, ರಕ್ಷಿತ್ ನಾಯ್ಕ್ ಹಾಗೂ ಸಿಬ್ಬಂದಿ ಭರತ್, ರಘುನಾಥ್ ಪೂಜಾರಿ ಸಹಿತ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ಜು.30:ತಿಂಗಳ ಷಷ್ಠಿ ಕಾರ್ಯಕ್ರಮ ..
ಬುಧವಾರದಂದು ನಡೆಯುವ ತಿಂಗಳ ಷಷ್ಠಿ ಕಾರ್ಯಕ್ರಮದಲ್ಲಿ ಹಾಲು ಪಾಯಸ ಸೇವೆ(ಸೇವಾ ದರ ರೂ.100), ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9980223709, 7795711499 ನಂಬರಿಗೆ ಸಂಪರ್ಕಿಸಬಹುದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.