ಪುತ್ತೂರು: ಆರ್ಯಾಪು ಗ್ರಾಮದಲ್ಲಿರುವ ಪುರಾತನ ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆಯಿಂದ ನಾಗನ ಸನ್ನಿಧಿಯಲ್ಲಿ ಭಕ್ತಾದಿಗಳು ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ, ನಾಗಪೂಜೆ ಸೇವೆಗಳನ್ನು ಸಲ್ಲಿಸಿ ಕೃತಾರ್ಥರಾದರು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
