ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನಾಗಸನ್ನಿಧಿಯಲ್ಲಿ ಜು.29ರಂದು ನಾಗರಪಂಚಮಿ ಆಚರಣೆ ನಡೆಯಿತು. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ನಾಗ ದೇವರಿಗೆ ವಿವಿಧ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.