ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ, ಪುತ್ತೂರು ಹಾಗೂ ವಕೀಲರ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯತ್ ಪುತ್ತೂರು, ಕರ್ನಾಟಕ ಪತ್ರಕರ್ತರ ಸಂಘ, ಪುತ್ತೂರು, ಅನಿಕೇತನ ಎಜುಕೇಶನಲ್ ಟ್ರಸ್ಟ್ ಹಾಗೂ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ) ಇವರ ಸಹಭಾಗಿತ್ವದಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರ ಜು.30ರಂದು ಪುತ್ತೂರು ನ್ಯಾಯಾಲಯ ಸಂಕೀರ್ಣ, ವಕೀಲರ ಭವನ ಪರಾಶರದಲ್ಲಿ ನಡೆಯಲಿದೆ.
ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸರಿತಾ ಡಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಜಗನ್ನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ಜೆ.ಎಂ.ಎಫ್.ಸಿ ಮತ್ತು ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ದೇವರಾಜ್ ವೈ. ಹೆಚ್, ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಪುತ್ತೂರು ಶಿವಣ್ಣ ಹೆಚ್.ಆರ್, ಸಂಪನ್ಮೂಲ ವ್ಯಕ್ತಿಗಳಾಗಿ ಗೌರೀಶ್ಚಂದ್ರ ಶಾನುಭೋಗ್, ಗೌರವ ಉಪಸ್ಥಿತರಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಪುತ್ತೂರು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವೃತ್ತಿಪರ ನಿರ್ದೇಶಕರಾದ ಬಿ. ವಸಂತಶಂಕರ, ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಕರ್ನಾಟಕ ಪತ್ರಕರ್ತರ ಪುತ್ತೂರು ತಾಲೂಕಿನ ಅಧ್ಯಕ್ಷರಾದ ಶ್ರೀಧರ ರೈ ಕೋಡಂಬು, ಪುತ್ತೂರು ವಕೀಲರ ಸಂಘದ ಉಪಾಧ್ಯಕ್ಷ ಮೋನಪ್ಪ, ಪುತ್ತೂರು ವಕೀಲರ ಸಂಘದ ಖಜಾಂಚಿ ಮಹೇಶ್ ಸವಣೂರು, ಪುತ್ತೂರು ವಕೀಲರ ಸಂಘದ ಜತೆ ಕಾರ್ಯದರ್ಶಿ ಮಮತ ಸುವರ್ಣ ಬಿ, ಸಂಯೋಜಕರಾಗಿ ವಕೀಲರಾದ ಕೃಷ್ಣಪ್ರಸಾದ್ ನಡ್ಸಾರು ಪಾಲ್ಗೊಳ್ಳಲಿದ್ದಾರೆ.
ಜು.31 ರಂದು ಬಿಳಿಯೂರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಆ.1ರಂದು ಕುಂಬ್ರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಆ.2ರಂದು ಉಪ್ಪಿನಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಆ.4ರಂದು ಕೆಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಆ.5ರಂದು ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಆ.6ರಂದು ಆರ್ಯಾಪು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ.
ಆ.6ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಸ್ವಾತಿ ಜೆ ರೈ, ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರಾದ ಮತ್ತು ಜೆ.ಎಂ.ಎಫ್.ಸಿ ಪುತ್ತೂರು ಹಾಗೂ ಸದಸ್ಯ ಕಾರ್ಯದರ್ಶಿಯವರು, ತಾ.ಕಾ.ಸೇ. ಸಮಿತಿಯ ಶಿವಣ್ಣ ಹೆಚ್.ಆರ್, ಕರ್ನಾಟಕ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುದೇಶ್ ಕುಮಾರ್ ಆಗಮಿಸಲಿದ್ದಾರೆ. ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ದೇವಿಪ್ರಸಾದ್ ಕೆ, ಆರ್ಯಾಪು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಮಾರ್ತಾಜೆ, ಪುತ್ತೂರು ತಾಲೂಕು ಪಂಚಾಯತ್ Day-NRLM ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಜಗತ್ ಕೆ ಉಪಸ್ಥಿತರಿರಲಿದ್ದಾರೆ.
ಹಲವು ಪ್ರಮುಖರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.