ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಶ್ರೀನಾಗ ದೇವರಿಗೆ ಕ್ಷೀರಾಭಿಷೇಕ ನಡೆದು ಬಳಿಕ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳು ನೆರವೇರಿತು.
ಈ ಸಂಧರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಊರ ಭಕ್ತಾದಿಗಳು ಭಾಗವಹಿಸಿದ್ದರು.