ವಿಟ್ಲ: ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆ ಎಂಬಲ್ಲಿ ಜು.29ರಂದು ರಾತ್ರಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ. ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಪೂರ್ಣಿಮಾ ಹೆಸರಿನ ಖಾಸಗಿ ಬಸ್ ನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.