ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಾಗರಪಂಚಮಿ

0

ಉಪ್ಪಿನಂಗಡಿ : ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ಸಿಯಾಳಾಭಿಷೇಕ, ಕ್ಷೀರಾಭಿಷೇಕ, ತಂಬಿಲ ಸೇವೆಗಳು ನೆರವೇರಿದವು.


ಕ್ಷೇತ್ರದ ಪ್ರಧಾನ ಅರ್ಚಕರಾದ ವೇ.ಮೂ. ಹರೀಶ್ ಉಪಾಧ್ಯಾಯ, ಶ್ರೀ ವತ್ಸ ಉಪಾಧ್ಯಾಯ ರವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಈ ಸಂಧರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾೖಕ್‌, ಸದಸ್ಯರಾದ ಸೋಮನಾಥ, ವೆಂಕಪ್ಪ ಪೂಜಾರಿ, ಕೃಷ್ಣ ರಾವ್ ಅರ್ತಿಲ, ದೇವಿದಾಸ್ ರೈ, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ , ವ್ಯವಸ್ಥಾಪಕ ವೆಂಕಟೇಶ್ ರಾವ್ , ಸಿಬ್ಬಂದಿ ಪದ್ಮನಾಭ ಕುಲಾಲ್, ಕೃಷ್ಣಪ್ರಸಾದ್, ಸುಧಾಕರ ಶೆಟ್ಟಿ ಗಾಂಧಿಪಾರ್ಕ್, ಹರೀಶ್ ಬಂಡಾರಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here