ಇಂದಿನ ಕಾರ್ಯಕ್ರಮ ( 30-07-2025)

0

ಪುತ್ತೂರು ನ್ಯಾಯಾಲಯ ಸಂಕೀರ್ಣ, ಪರಾಶರ ವಕೀಲರ ಭವನದಲ್ಲಿ ಬೆಳಿಗ್ಗೆ ೧೦ಕ್ಕೆ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಾಗಾರ
ಬೆಟ್ಟಂಪಾಡಿ ಗ್ರಾ.ಪಂ ಸಮುದಾಯ ಭವನ ಕಟ್ಟಡ (ರೆಂಜ)ದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಅಬೀರ ಅಂಗನವಾಡಿಯಲ್ಲಿ ಅಪರಾಹ್ನ ೨ಕ್ಕೆ ಬೆಳಂದೂರು ೨ನೇ ವಾರ್ಡುನ ವಾರ್ಡುಸಭೆ
ಬಡಗನ್ನೂರು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೧ರಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ, ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆ
ಆದಿನೆಲೆ ಕಾಲನಿಯ ಸಭಾಭವನ ನೆಟ್ಟಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಬಿಳಿನೆಲೆ ೧ನೇ ವಾರ್ಡ್, ಬಿಳಿನೆಲೆ ಗ್ರಾ.ಪಂ. ಸಭಾಭವನದಲ್ಲಿ ಅಪರಾಹ್ನ ೧೨ಕ್ಕೆ ಬಿಳಿನೆಲೆ ೨ನೇ ವಾರ್ಡ್, ಕೈಕಂಬ ಹಿ.ಪ್ರಾ. ಶಾಲೆಯಲ್ಲಿ ೨.೩೦ಕ್ಕೆ ಬಿಳಿನೆಲೆ ೩ನೇ ವಾರ್ಡ್‌ನ ವಾರ್ಡುಸಭೆ
ವಿದ್ಯಾಪುರ ಅಂಗನವಾಡಿ ಕೇಂದ್ರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಬಕ ೧ನೇ ವಾರ್ಡ್, ಪೋಳ್ಯ ಅಂಗನವಾಡಿ ಕೇಂದ್ರದಲ್ಲಿ ಅಪರಾಹ್ನ ೧೨ಕ್ಕೆ ಕಬಕ ೨ನೇ ವಾರ್ಡ್, ಮುರ ಹಿ.ಪ್ರಾ. ಶಾಲೆಯಲ್ಲಿ ೩ಕ್ಕೆ ಕಬಕ ೩ನೇ ವಾರ್ಡ್‌ನ ವಾರ್ಡುಸಭೆ
ಕೆದಿಲ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಐತ್ತೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ಅಜಲಾಡಿಬೀಡು ಕರಿಯಪ್ಪ ಬಂಟ, ಮೊಗರುಗುತ್ತುರವರ ೮೩ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸವಣೂರು ಮೊಗರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪವಮಾನ ಹೋಮ, ಪವಮಾನ ಕಲಶಾಭಿಷೇಕ, ಮಹಾಪೂಜೆ, ನಾಗದೇವತೆಗೆ ತಂಬಿಲ, ರಾತ್ರಿ ಶ್ರೀ ದುರ್ಗಾನಮಸ್ಕಾರ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ
ಸಂಪ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ಮಧ್ಯಾಹ್ನ ೧೨ಕ್ಕೆ ರೋಟರಿ ಕ್ಲಬ್ ಪುತ್ತೂರು ಈಸ್ಟ್‌ನಿಂದ ವನಮಹೋತ್ಸವ
ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್‌ನಲ್ಲಿ ಜನರೇಟ್‌ಗಳ ಮಾಹಿತಿ, ಪ್ರದರ್ಶನ, ಮಾರಾಟ
ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಜೆ ೫ರಿಂದ ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಯಕ್ಷಗಾನ ತಾಳಮದ್ದಳೆ ಸಪ್ತಾಹ -`ಭೀಷ್ಮ ಭಾರತ’
ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ರಾತ್ರಿ ವಿಶೇಷ ದುರ್ಗಾಪೂಜೆ
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಧ್ಯಾಹ್ನ ತಿಂಗಳ ಶುದ್ದ ಷಷ್ಠಿ ಪೂಜೆ, ಅನ್ನಸಂತರ್ಪಣೆ
ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಿಗ್ಗೆ ತಿಂಗಳ ಷಷ್ಠಿ ಕಾರ್ಯಕ್ರಮ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ

LEAVE A REPLY

Please enter your comment!
Please enter your name here