ಪುತ್ತೂರು: ಕರ್ನಾಟಕ ಆಡಳಿತ ಸೇವೆಗೆ ಸಂಬಂಧಿಸಿದ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದ್ದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ|ಜಿ.ಸಂತೋಷ್ ಕುಮಾರ್ ಹಾಗೂ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ರಾಜು ಕೆ. ಸಹಿತ ಒಟ್ಟು 14 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಡಾ|ಜಿ.ಸಂತೋಷ್ ಕುಮಾರ್‌ರವರನ್ನು ಮಂಗಳೂರು ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ಹಾಗೂ ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ಕೆ.ರವರನ್ನು ಜಿಲ್ಲಾ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಿದ್ದಾರೆ. ಡಾ|ಜಿ.ಸಂತೋಷ್ ಕುಮಾರ್ ರವರು 2023 ರಿಂದ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.