ಪುತ್ತೂರು: ನಗರದ ನಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಡಿ.ಆರ್. ಶ್ರೇಯ ಅವರು ಅಲಂಕಾರಿನ ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ತರುಣಿಯರ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ತನ್ಮೂಲಕ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ವಿಟ್ಲ ನಿವಾಸಿ ರೋಹಿಣಿ ಬಿ ಇವರ ಪುತ್ರಿ ಆಗಿರುತ್ತಾರೆ.
