ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಅಧ್ಯಕ್ಷೆ ವಿದ್ಯಾಶ್ರೀ ಸರಳೀಕಾನ ಇವರ ಅಧ್ಯಕ್ಷತೆಯಲ್ಲಿ ಜು.30 ರಂದು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚೆಲುವ ರಂಗಪ್ಪ ನೊಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.ಉಪಾಧ್ಯಕ್ಷ ಮಹೇಶ್.ಕೆ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪಿಡಿಒ ಸೌಮ್ಯ.ಎಂ. ಎಸ್ ಸ್ವಾಗತಿಸಿ ವರದಿ ವಾಚಿಸಿ ವಂದಿಸಿದರು.