ಪುತ್ತೂರು:ಮೂರು ವರ್ಷಗಳ ಹಿಂದೆ ದಾಖಲಾಗಿದ್ದ ಅಕ್ರಮ ಮದ್ಯ ಸಾಗಾಟ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.
2022ರ ದ.7ರಂದು ಪುತ್ತೂರಿನ ಅಬಕಾರಿ ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಇಲಾಖಾ ವಾಹನದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ, ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಣಿ ಕಡೆಗೆ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮ ಮದ್ಯ ಸಾಗಾಟದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದರು.
ನಂತರ ತನಿಖೆಯನ್ನು ಕೈಗೊಂಡ ಅಬಕಾರಿ ಉಪನಿರೀಕ್ಷಕರು, ಪ್ರಕರಣದ ಆರೋಪಿ ಕೆದಿಲ ಗ್ರಾಮದ ಸತ್ತಿಕಲ್ಲು ಗೋಪಾಲ ಗೌಡ ವಿರುದ್ಧ ಪುತ್ತೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನಿರ್ದೋಷಿ ಎಂದು ಪರಿಗಣಿಸಿ ಖುಲಾಸೆಗೊಳಿಸಿದೆ.ಆರೋಪಿಯ ಪರವಾಗಿ ವಕೀಲರಾದ ಸಂತೋಷ್ ಕುಮಾರ್ ಉಪ್ಪಿನಂಗಡಿ ಮತ್ತು ನಿತೇಶ್ ವಾದಿಸಿದ್ದರು.