ಪುತ್ತೂರು: ಪರಿವಾರ ಬಂಟರ ಸಂಘ ಮಂಗಳೂರು,ಪರಿವಾರ ಬಂಟರ ಸಂಘ ಪುತ್ತೂರು ವಲಯ,ಮಹಿಳಾ ವೇದಿಕೆ ಮತ್ತು ಯುವ ಪರಿವಾರ ಬಂಟರ ವೇದಿಕೆ ಪುತ್ತೂರು ವಲಯದ ಸಹಭಾಗಿತ್ವದಲ್ಲಿ ಪುತ್ತೂರು ಕೊಡಿಪ್ಪಾಡಿಯಲ್ಲಿರುವ ಮನೋಹರ್ ನಾೖಕ್ ಕೊಳಕ್ಕಿಮಾರ್ ರವರ ಕೊಳಕ್ಕಿಮಾರ್ ಮನೆಯಲ್ಲಿ ಅ.3ರಂದು ಬೆಳಿಗ್ಗೆ ನಡೆಯಲಿದೆ.
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ಕೆ.ರಾಧಾಕೃಷ್ಣ ನಾೖಕ್ ಕೊಟ್ಟಿಬೆಟ್ಟು ಏಳ್ನಾಡುಗುತ್ತು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಪರಿವಾರ ಬಂಟರ ಸಂಘದ ಕೇಂದ್ರ ಸಮಿತಿ ಮತ್ತು ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಎ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪರಿವಾರ ಬಂಟರ ಸಂಘ ಬೆಂಗಳೂರು ವಲಯದ ಅಧ್ಯಕ್ಷರಾದ ರಘುವೀರ್ ನಾೖಕ್,ತರಭೇತುದಾರರು ಮತ್ತು ಸಂಶೋಧನ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.