ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇದರ ಮಾರ್ಗದರ್ಶನದಲ್ಲಿ ವಲಯ ಬಂಟರ ಸಂಘ ನೆಲ್ಯಾಡಿ ಇದರ ಆಶ್ರಯದಲ್ಲಿ ಆ.10ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದಲ್ಲಿ ನಡೆಯಲಿರುವ ’ ಆಟಿಡೊಂಜಿ ಬಂಟೆರೆ ಸೇರಿಗೆ’ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಜು.೩೦ರಂದು ಸಂಘದ ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಶ್ರೀಮಾತಾ ಅವರ ಮನೆಯಲ್ಲಿ ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಪ್ರತಾಪಚಂದ್ರ ರೈ ಕುದ್ಮಾರುಗುತ್ತುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಪದಾಧಿಕಾರಿಗಳಾದ ಮಹಾಬಲ ಶೆಟ್ಟಿ, ಬಿ.ರಮೇಶ ಶೆಟ್ಟಿ ಬೀದಿ, ಚಂದ್ರಶೇಖರ ಶೆಟ್ಟಿ ಪಟ್ಟೆ, ಪ್ರವೀಣ ಭಂಡಾರಿ, ಭಾಸ್ಕರ ರೈ ತೋಟ, ಪ್ರಹ್ಲಾದ ಶೆಟ್ಟಿ, ಪದ್ಮನಾಭ ಶೆಟ್ಟಿ, ಯಾದವ ಶೆಟ್ಟಿ, ಐತ್ತಪ್ಪ ಶೆಟ್ಟಿ ಡೆಮ್ಮೆಜಾಲು, ವಿಶ್ವನಾಥ ಶೆಟ್ಟಿ, ಪಿ.ಜಯಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.