ಪುತ್ತೂರು: ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವು ದಾರಂದಕುಕ್ಕು ಬೀರಿಗ ಜಗದೀಶ್ ಅವರ ನಿವಾಸದಲ್ಲಿ ಜು.27ರಂದು ನಡೆಯಿತು.
ಅಧ್ಯಕ್ಷರಾಗಿ ಮನೋಜ್ ದಾರಂದಕುಕ್ಕು ಅವರನ್ನು ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಚಿಕ್ಕಮೂಡ್ನೂರು, ಜೊತೆಗೆ ಕಾರ್ಯದರ್ಶಿಯಾಗಿ ದಯಾನಂದ ಮೇರ್ಲ, ಕೋಶಾಧಿಕಾರಿಯಾಗಿ ಯೋಗೀಶ್ ಮೇರ್ಲ, ಉಪಾಧ್ಯಕ್ಷರಾಗಿ ಚಿದಾನಂದ ಬೀರಿಗ ಮತ್ತು ಜಗದೀಶ್ ಬೀರಿಗ, ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪುಳುವಾರು, ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಕಂಜೂರು ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭ ನಿಕಟಪೂರ್ವ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.
ವರುಣ್ ಕೌಡಿಚ್ಚಾರ್ ಸಂಘ ನೋಂದಾವಣೆ ಬಗ್ಗೆ ಮಾಹಿತಿ ಹಂಚಿಕೊಂಡರು. ನಾಗೇಶ್ ಟಿ ಎಸ್ ಕಾರ್ಯಕ್ರಮ ನಿರೂಪಿಸಿದರು.