ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ ಇದರ ಆಶ್ರಯದಲ್ಲಿ ಯುವ ಬಂಟರ ವಿಭಾಗ – ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದೊಂದಿಗೆ ಬಂಟೆರೆ ಆಟಿದ ಕೂಟ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದಾಂಪತ್ಯ ಜೀವನದಲ್ಲಿ ಸುವರ್ಣಮಹೋತ್ಸವ ಆಚರಿಸಿರುವ ದಂಪತಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಆ.3 ರಂದು ಪುತ್ತೂರು ಎಂ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿದೆ.
ಪೂರ್ವಾಹ್ನ 9.30 ರಿಂದ ಆರಂಭವಾಗಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಬಂಟರ ಸಂಘ ಬೆಂಗಳೂರು ಅಧ್ಯಕ್ಷೆ ಯೋಗ್ಯ ಎಲ್ ರೈರವರು ನೇರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರು ವಹಿಸಲಿದ್ದಾರೆ. ಸನ್ಮಾನ ಸಮಾರಂಭವನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸವಣೂರು ಸೀತಾರಾಮ ರೈ,ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್, ರಾಜ್ಯಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭಾಗವಹಿಸಲಿದ್ದಾರೆ.
ಪತ್ರಕರ್ತೆ ಹೇಮಾ ಜಯರಾಮ್ ರೈರವರು ಆಶಯ ಭಾಷಣ ಮಾಡಲಿದ್ದಾರೆ. ಮಹಿಳಾ ಬಂಟರ ವಿಭಾಗದ ಗೌರವಾಧ್ಯಕ್ಷೆ ಮಾಜಿ ಶಾಶಕಿ ಮಲ್ಲಿಕಾ ಪ್ರಸಾದ್ ಭಂಡಾರಿ, ಮಹಿಳಾ ಬಂಟರ ವಿಭಾಗದ ಮಾಜಿ ಅಧ್ಯಕ್ಷರುಗಳಾದ ಕುಮುದಾ ಎಲ್ ಎನ್ ಶೆಟ್ಟಿ, ಮೀರಾ ಭಾಸ್ಕರ್ ರೈ, ನಿಕಟಪೂರ್ವ ಅಧ್ಯಕ್ಷೆ ಸಬಿತಾ ಭಂಡಾರಿ, ಯುವ ಬಂಟರ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ, ವಿದ್ಯಾರ್ಥಿ ಬಂಟರ ವಿಭಾಗದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳತ್ತಡ್ಡ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷೆ ಗೀತಾ ಮೋಹನ್ರೈ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ ಶೆಟ್ಟಿ ಹಾಗೂ ಕೋಶಾಧಿಕಾರಿ ಅರುಣಾ ದಿನಕರ್ ರೈ ತಿಳಿಸಿದ್ದಾರೆ.
ಗೌರವಾರ್ಪಣೆ
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ,ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಶೆಟ್ಟಿ,ಶಿಸಾಂಸ್ಕೃತಿಕ ಸಂಚಾಲಕರಾದ ಹರಿಣಾಕ್ಷಿ ಜೆ ಶೆಟ್ಟಿ, ಹಾಗೂ ತನಿಷಾ ಶೆಟ್ಟಿ (ಇಂಡಿಯ ಬುಕ್ ಓಫ್ ರೆಕಾರ್ಡ್ಸ್, India Book of Records, International Fastest Child to Cook food) ಅವರನ್ನು ಮಹಿಳಾ ಬಂಟರ ವಿಭಾಗದಿಂದ ಗೌರವರ್ಪಣೆ ನಡೆಯಲಿದೆ.