ಕಡಬ: ಕಡಬ ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಡಬ ಯೋಗಕ್ಷೇಮ ಸಂಕೀರ್ಣದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಕಛೇರಿಯನ್ನು ಉದ್ಘಾಟಿಸಲಾಯಿತು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಛೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಚುನಾವಣಾ ಉಸ್ತುವಾರಿ ಮಂಗಳೂರು ಶಾಸಕ ಡಾ. ವೈ ಭರತ್ ಶೆಟ್ಟಿ ಮಾತನಾಡಿದರು. ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಸುಳ್ಯಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ., ಜಿಲ್ಲಾ ಕಾರ್ಯಕಾರಿಣಿ ವಿಶೇಷ ಆಹ್ವಾನಿತ ಬಾಲಕೃಷ್ಣ ಸುವರ್ಣ ಬಾಣಜಾಲು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಕಡಬ ಶಕ್ತಿಕೇಂದ್ರದ ಅಧ್ಯಕ್ಷ ಪ್ರಕಾಶ್ ಎನ್.ಕೆ., ಕಾರ್ಯದರ್ಶಿ ಅಶೋಕ್ ಕುಮಾರ್ ಪಿ. ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯ ಕುಮಾರ್ ಕಂದಡ್ಕ ಸ್ವಾಗತಿಸಿ, ನಿರೂಪಿಸಿದರು. ಪ್ರದೀಪ್ ರೈ ಮನವಳಿಕೆ ವಂದಿಸಿದರು.