ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಖ್ಯರಸ್ತೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇವುಗಳ ಸಹಯೋಗದೊಂದಿಗೆ ಜು.31ರಂದು ಮಳಿಗೆಯ ಸಿಬಂದಿಗಳಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ನೆರವೇರಿತು.
ಮಳಿಗೆಯ ಸುಮಾರು 70 ಮಂದಿ ಸಿಬಂದಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ಉಪಸ್ಥಿತರಿದ್ದರು.