ಪೆರಾಬೆ: ಜೇಸಿಐ ಆಲಂಕಾರು ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಕುಂತೂರುಪದವು ಸಂತಜಾರ್ಜ್ ಪ್ರೌಢಶಾಲೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಶಿಕ್ಷಕಿ ಭುವನೇಶ್ವರಿ ಪಿ.ಎಮ್.ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಶಾಲಾ ವಠಾರದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆಲಂಕಾರು ಜೇಸಿಐ ಘಟಕದ ಅಧ್ಯಕ್ಷ ಗುರುರಾಜ್ ರೈ ಅಧ್ಯಕ್ಷತೆ ವಹಿಸಿದ್ದರು. ಸಂತಜಾರ್ಜ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಹರಿಶ್ಚಂದ್ರ ಕೆ., ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಜೇಸಿಐನ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.