ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕೆದಿಲ & ನಗರ ಫೀಡರ್ ನಲ್ಲಿ ಆ.2 (ಶನಿವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕಲ್ಲೇಗ, ಮಂಜಲ್ಪಡ್ಪು, ಉರ್ಲಾಂಡಿ, ಬಪ್ಪಳಿಗೆ ಕರ್ಕುಂಜ, ಸಿಂಗಾಣಿ & ಪೆರಿಯತ್ತೋಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಸಂಸ್ಥೆಯ ಪ್ರಕಟನೆ ತಿಳಿಸಿದೆ.