ಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ೯.೩೦ರಿಂದ ಫೈಬ್ರೋಸ್ಕ್ಯಾನ್ ಉಚಿತ ತಪಾಸಣೆ
ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ೧೦ರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬನ್ನೂರು ಕರ್ಮಲ ಕೆ.ಇ.ಬಿ ಆಫೀಸ್ ಬಳಿ, ಕೆ.ಎಮ್. ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಸಂಜೆ ೪ರಿಂದ ಬ್ಯಾಡ್ಮಿಂಟನ್ ತರಬೇತಿ ಪ್ರಾರಂಭ
ಕುಂಬ್ರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಪರಾಹ್ನ ೨.೩೦ಕ್ಕೆ ಒಳಮೊಗ್ರು ಗ್ರಾ.ಪಂನಿಂದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಾಗಾರ
ಬೆಳಂದೂರು ಪಂಚಾಯತ್ ಸಭಾಭವನದಲ್ಲಿ ಅಪರಾಹ್ನ ೨.೩೦ಕ್ಕೆ ಬೆಳಂದೂರು ೧ನೇ ವಾರ್ಡುನ ವಾರ್ಡುಸಭೆ
ಕಟ್ಟೆಜೀರು ಅಂಗನವಾಡಿ ಕೇಂದ್ರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ
ಕೆಯ್ಯೂರು ಗ್ರಾ.ಪಂ ೧ನೇ ವಾರ್ಡ್‌ನ ವಾರ್ಡುಸಭೆ
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಬೆಳಿಗ್ಗೆ ೯.೩೦ರಿಂದ ರಕ್ಷಕ-ಶಿಕ್ಷಕ ಸಂಘದ ಸಭೆ
ಬೆಟ್ಟಂಪಾಡಿ ಸಿ.ಎ. ಬ್ಯಾಂಕ್ ಸೊಸೈಟಿಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಇರ್ದೆ-ಬೆಟ್ಟಂಪಾಡಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಪುತ್ತೂರು ಶ್ರೇಯಸ್ ಬಿಲ್ಡಿಂಗ್ ಯೋಜನಾ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು ತಾಲೂಕು ಯೋಜನೆಯ ವತಿಯಿಂದ ಜಿಲ್ಲೆಯ ೫೫ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ಒದಗಣೆ, ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನಾ ಮಂಜೂರಾತಿ ಪತ್ರ ವಿತರಣೆ
ಮೂಡಬಿದ್ರೆಯ ಆಳ್ವಾಸ್ ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ
ವೈಕುಂಠ ಸಮಾರಾಧನೆ
ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಮಧ್ಯಾಹ್ನ ೧೨ಕ್ಕೆ ತುಂಗಮ್ಮ ರೈ ಕುಕ್ಕುಂಜೋಡು ಬಾರಿಕೆಯವರ ವೈಕುಂಠ ಸಮಾರಾಧನೆ