ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯ, ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ರಾಮಕುಂಜ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಆ.3ರಂದು ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ 9ರಿಂದ ರಾಮಕುಂಜ ಗ್ರಾಮದ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಜಯ ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್ ಬಾಲಕೃಷ್ಣ ಗೌಡ ಕತ್ಲಡ್ಕ ಕೊಂಡ್ಯಾಡಿ ಉದ್ಘಾಟಿಸಲಿದ್ದಾರೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ ಅಧ್ಯಕ್ಷತೆ ವಹಿಸಲಿದ್ದಾರೆ. ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯ ಸಹಶಿಕ್ಷಕಿ ಮಾಲತಿ ಓಡ್ಲ ಉಪನ್ಯಾಸ ನೀಡಲಿದ್ದಾರೆ. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು, ಒಕ್ಕಲಿಗ ಸ್ವಸಹಾಯ ಸಂಘಗಳ ಟ್ರಸ್ಟ್‌ನ ಅಧ್ಯಕ್ಷ ಡಿ.ವಿ.ಮನೋಹರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಅತ್ಯುತ್ತಮ ಸ್ವಸಹಾಯ ಸಂಘಗಳ ಗುರುತಿಸುವಿಕೆ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.