ಪುತ್ತೂರು: ಬರಹಗಾರ, ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಮತ್ತು ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಸಾಧನೆಗಾಗಿ ‘ಆದರ್ಶ ಜೇನು ಕೃಷಿ ದಂಪತಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಚಂದನ ಸಾಹಿತ್ಯ ವೇದಿಕೆಯು ತನ್ನ 20ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿರುವ ‘ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವ -2025’ ಸಮಾರಂಭದಲ್ಲಿ ಕುಮಾರ್ ಪೆರ್ನಾಜೆ ಮತ್ತು ಸೌಮ್ಯ ದಂಪತಿಗೆ ಸುಳ್ಯದ ಚಂದನ ಸಾಹಿತ್ಯ ವೇದಿಕೆಯು 2025 ನೇ ಸಾಲಿನ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಕಾರ್ಯಕ್ರಮ ಆ.3ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್ ಸುಳ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.