ವಿಟ್ಲ: ರಸ್ತೆಯಲ್ಲಿ ತೆರಳುತ್ತಿದ್ದ ಪಾದಚಾರಿ ಮಹಿಳೆಗೆ ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ವಿಟ್ಲ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ರಸ್ತೆಯ ಮುಂಭಾಗ ನಡೆದಿದೆ.
ಗಾಯಗೊಂಡವರನ್ನು ವಿಟ್ಲದ ಆಭರಣ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಶಿಮಠ ನಿವಾಸಿ, ಭವ್ಯ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಕೂಡಲೇ ವಿಟ್ಲ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.