ಕಾಣಿಯೂರು: ಕಾಣಿಯೂರು ಸ. ಹಿ. ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ, ಶಾಲಾ ಎಸ್.ಡಿಎಂಸಿ ಹಾಗೂ ಒಡಿಯೂರು ಗ್ರಾಮ ವಿಕಾಸ ಯೋಜನೆ ಕಾಣಿಯೂರು ಘಟ ಸಮಿತಿ ಇವರ ಆಶ್ರಯದಲ್ಲಿ ಆಟಿದ ಕೂಟ ಹಾಗೂ ನೂತನ ಧ್ವಜಸ್ತಂಭ ಉದ್ಘಾಟನೆಯು ಆ.3ರಂದು ನಡೆಯಲಿದೆ.
ಕಾಣಿಯೂರು ಮಠದ ವ್ಯವಸ್ಥಾಪಕ ಶ್ರೀನಿಧಿ ಆಚಾರ್ ಉದ್ಘಾಟಿಸಲಿದ್ದಾರೆ. ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ ಧ್ವಜಸ್ತಂಭವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ಅಧ್ಯಕ್ಷತೆ ವಹಿಸಲಿದ್ದಾರೆ. ದೇವಿಪ್ರಸಾದ್ ಗೌಡ ಸಜಂಕು ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.