ಆಲಂಕಾರು: ದುರ್ಗಾಂಬಾ ಪದವಿ ಪೂರ್ವ ಕಾಲೇಜಿ ಆಲಂಕಾರಿನಲ್ಲಿ ಕೋಡ್ ಕ್ರಾಫ್ಟ್ ಟೆಕ್ನಾಲಜಿಸ್ ರವರ ಸಹಕಾರದೊಂದಿಗೆ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು, ಮತ್ತು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ ಜರುಗಿತು.

ಕಾರ್ಯಕ್ರಮವನ್ನು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸ್ಥಾಪಕ ಅಧ್ಯಕ್ಷ ಡಾ. ಶ್ರೀಶ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕೂಡ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ಸಾಧನೆಗಳನ್ನು ಮಾಡುವಂತಾಗಲು ಪ್ರೇರಕವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ವಯಂ ಸೇವಕರಾದ ಪ್ರಜ್ವಲ್, ಅನನ್ಯ, ಹರ್ಷಿತಾ, ನಿಧಿಶಾ ಅವರು ಉಪಸ್ಥಿತರಿದ್ದರು. ಕಾಲೇಜು ವಿಭಾಗದ ಪ್ರಾಂಶುಪಾಲರಾದ ರೂಪ ಜೆ ರೈ ಅವರು ಮತ್ತು ಸಭಾಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಗುರುಗಳಾದ ನವೀನ್ ರೈ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿನಿಯರಾದ ಪಲ್ಲವಿ, ದೀಪಿಕಾ, ಲಿಖಿತಾ, ಯಶಸ್ವಿನಿ, ಪ್ರೀತಾ ಅವರು ಪ್ರಾರ್ಥಿಸಿದರು. ಆಂಗ್ಲಭಾಷಾ ಶಿಕ್ಷಕರಾದ ಜನಾರ್ದನ ಅವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿಜ್ಞಾನ ಶಿಕ್ಷಕಿಯಾದ ನಿವ್ಯ ಪಿ.ಎನ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳನ್ನು ಪರಿಶೀಲನೆ ಮಾಡಿ ಅಂಕಗಳನ್ನು ನೀಡಿ ವಿಜೇತರನ್ನು ಆಯ್ಕೆ ಮಾಡಿದರು. ನಂತರ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು.