ಬೆಟ್ಟಂಪಾಡಿ: ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯಲ್ಲಿ ಜು.26ರಂದು ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಆಚರಿಸಲಾಯಿತು.
ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಗಿಲ್ ನಲ್ಲಿ ವೀರರಾಗಿ ಮಾಡಿದ ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಹಣತೆ ಬೆಳಗಿದರು. ಸಹ ಶಿಕ್ಷಕಿ ಕುಮಾರಿ ಭಾಗ್ಯಶ್ರೀ ರೈ ಕಾರ್ಗಿಲ್ ದಿನಾಚರಣೆಯ ಉದ್ದೇಶ ಹಾಗೂ ಮಹತ್ವವನ್ನು ತಿಳಿಸಿದರು.
ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು. ಶಿಕ್ಷಕರಾದ ಪ್ರಶಾಂತ್ ಎ ಕಾರ್ಯಕ್ರಮ ನಿರೂಪಿಸಿದರು.
