ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 13ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಅನಾವರಣ ಕಾರ್ಯಕ್ರಮವು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು.
ಕಾಣಿಯೂರು ಮಠದ ಮ್ಯಾನೇಜರ್ ಶ್ರೀನಿಧಿ ಅಚಾರ್ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅರ್ಚಕರಾದ ಬಾಲಕೃಷ್ಣ ಆಸ್ರಣ್ಣ,ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಅಧ್ಯಕ್ಷ ರಾಜೇಶ್ ಮೀಜೆ, ಕಾರ್ಯದರ್ಶಿ ದೀಕ್ಷಿತ್ ಕಂಪ, ಉಪಾಧ್ಯಕ್ಷ ಧರ್ಮಪಾಲ ಕಲ್ಪಡ, ಭಜನಾ ಮಂಡಳಿಯ ಕಾರ್ಯದರ್ಶಿ ಜಯಂತ ಅಬೀರ, ಭಜನಾ ಮಂಡಳಿಯ ಕೋಶಾಧಿಕಾರಿ ಕೀರ್ತಿ ಕುಮಾರ್ ಎಲುವೆ,ಯುವಕ ಮಂಡಲದ ಮಾಜಿ ಅಧ್ಯಕ್ಷ ಪುನೀತ್ ಕಲ್ಪಡ,ಕೇಶವ ಕಾಣಿಯೂರು,
ಸುಂದರ ಬೆದ್ರಾಜೆ,ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಯಕ್ಷಮಿತ್ರ ಬಳಗದ ಹರಿಪ್ರಸಾದ್ ರೈ, ಡಾ|ಉದಯ ಕುಮಾರ್, ಪಾರ್ವತಿ ಕಾಣಿಯೂರು,ಜನನಿ ಕಾಣಿಯೂರು, ರೇವತಿ ಕಲ್ಪಡ, ರಮಾದೇವಿ ಅನಿಲ, ಯುವನ್ ರಾಜ್ ಉಪಸ್ಥಿತರಿದ್ದರು.