ಕರಾಟೆ ಸ್ಪರ್ಧೆ: ದ್ವಿತೀಯ
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ವಿದ್ಯಾ ಭಾರತಿ ಹಾಗೂ ತೊಕ್ಕೊಟ್ಟಿನ ರಾಷ್ಟ್ರೋತ್ಥಾನ ವಿದ್ಯಾಲಯಗಳ ಸಹಯೋಗದಲ್ಲಿ ಕೊಣಾಜೆಯ ಮಂಗಳುರು ವಿಶ್ವವಿದ್ಯಾಲಯದಲ್ಲಿ ನಡೆದ ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಎಸ್.ಅಖಿಲ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್., ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಬಿ.ಆರ್. ಸೂರ್ಯ ಹಾಗೂ ಅಕ್ಷಜ್ ರೈ ಪಿ. ತಂಡದಲ್ಲಿ ಭಾಗವಹಿಸಿರುತ್ತಾರೆ.
ಅಂತೆಯೇ ಆಲಂಕಾರಿನ ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ 19 ವರ್ಷದ ಹಾಗೂ 700 ಕೆ.ಜಿ. ಕೆಳಗಿನ ವಿಭಾಗದ ಜಿಲ್ಲಾ ಮಟ್ಟದ ಹುಡುಗರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಅಜೇಯ ಕೃಷ್ಣ ಡಿ. ದ್ವಿತೀಯ ಸ್ಥಾನ ಪಡೆದಿರುತ್ತಾರೆ.