ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಪೂರ್ಣಕಾಲಿಕ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸುರೇಶ್ ನಾಯ್ಕ್‌ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಅವಿನಾಶ್ ಬಿ.ಆರ್.ರವರು ಎಂಎಲ್‌ಸಿ ಕಿಶೋರ್ ಕುಮಾರ್‌ರವರ ಆಪ್ತ ಸಹಾಯಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಸುರೇಶ್ ನಾಯ್ಕ್‌ರವರನ್ನು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಯವರು ನೇಮಕ ಮಾಡಿದ್ದಾರೆ.
ಸುರೇಶ್ ನಾಯ್ಕ್‌ರವರು ಕಬಕ ಗ್ರಾಮ ಪಂಚಾಯತ್‌ನಲ್ಲಿ ಕಳೆದ 4 ವರ್ಷಗಳಿಂದ ದ್ವಿತೀಯ ದರ್ಜೆ ಲೆಕ್ಕಸಹಾಯಕರಾಗಿ ಆ ಬಳಿಕ ಗ್ರೇಡ್-1 ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಈ ಹಿಂದೆ ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಸುರೇಶ್ ನಾಯ್ಕ್‌ರವರು ಬಂಟ್ವಾಳ ತಾಲೂಕು ಕೇಪು ಗ್ರಾಮದ ನಿವಾಸಿಯಾಗಿದ್ದಾರೆ.