
ವಿಟ್ಲ: ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಆವರಣ ಗೋಡೆಗೆ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ಕನ್ಯಾನ ಆನೆಕಲ್ಲು ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸ್ ವಿಟ್ಲ ಕೆ.ಎಸ್.ಆರ್.ಟಿ.ಸಿ.ನಿಲ್ದಾಣದ ಬಳಿ ತಲುಪುತ್ತಿದ್ದಂತೆ
ಬ್ರೇಕ್ ವೈಫಲ್ಯಗೊಂಡು ರಸ್ತೆ ಬದಿಯ ಆವರಣಗೋಡೆಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಆವರಣಗೋಡೆ ಕುಸಿದುಬಿದ್ದಿದ್ದು, ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. ಸುಮಾರು 17 ಕ್ಕೂ ಅಧಿಕ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣ ರವರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.