ಆ.4:ರೋಟರಿ ಈಸ್ಟ್, ರೋಟರಿ ಟೆಂಪಲ್ ಟೆರೇಸ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಈಸ್ಟ್, ರೋಟರಿ ಕ್ಲಬ್ ಆಫ್ ಟೆಂಪಲ್ ಟೆರೇಸ್, ಫ್ಲೋರಿಡಾ, ಯು.ಎಸ್.ಎ ಇದರ ಆಶ್ರಯದಲ್ಲಿ ಕಾಮತ್ ಆಪ್ಟಿಕಲ್ಸ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ಆ.4 ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಲಿದೆ.

ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಶಶಿಧರ್ ಕಿನ್ನಿಮಜಲುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಡಾ.ಶಿವಪ್ರಕಾಶ್ ಎಂ.ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ, ರೋಟರಿ ವಲಯ ಐದರ ಅಸಿಸ್ಟೆಂಟ್ ಗವರ್ನರ್ ಪ್ರಮೀಳಾ ರಾವ್, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಸಮುದಾಯ ಸೇವಾ ವಿಭಾಗದ ನಿರ್ದೇಶಕ ಅಬ್ಬಾಸ್ ಮುರ, ಕಾರ್ಯದರ್ಶಿ ನವೀನ್ ರೈ ಪಂಜಳರವರು ಭಾಗವಹಿಸಲಿದ್ದಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧವ ಶಾಲೆ ಹಾಗೂ ರೋಟರಿ ಕ್ಲಬ್ ಪುತ್ತೂರು ಈಸ್ಟ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here