ಪುತ್ತೂರು: ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಗಸ್ಟ್ 27, 28 ಮತ್ತು 29ರಂದು ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಆ.3ರಂದು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.

ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ವಿಧಿವಿಧಾನ ನೆರವೇರಿಸಿದರು. ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿಗುತ್ತು ಚಾವಡಿ, ಅಧ್ಯಕ್ಷ ಕೇಶವ ಭಂಡಾರಿ ಕೈಪ, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ, ಪದಾಧಿಕಾರಿಗಳಾದ ಜಯಾನಂದ ಕೆ, ಕುಮಾರನಾಥ ಎಸ್, ಭರತ್ ಗೌಡ ನಿಡ್ಯ, ಯೋಗೀಶ್ ಸಾಮಾನಿ ಸಂಪಿಗೆದಡಿ, ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
