ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ಕೃಷ್ಣ ವೇಷ ಸ್ಪರ್ಧೆ

0

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು ಹಾಗೂ ಚಿಣ್ಣರ ಅಂಗಳ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ವಿದ್ಯಾಮಾತಾ ಅಕಾಡೆಮಿಯ ಆವರಣದಲ್ಲಿ ಆ.10.ರಂದು ಬೆಳಿಗ್ಗೆ 10 ಗಂಟೆಯಿಂದ ಕೃಷ್ಣ ವೇಷ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆಯಲಿದ್ದು, 01ವರ್ಷದಿಂದ 03ವರ್ಷದೊಳಗಿನ ಮಕ್ಕಳು ಹಾಗೂ 03ವರ್ಷದಿಂದ 06ವರ್ಷದೊಳಗಿನ ಮಕ್ಕಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳಲು ಅವಕಾಶ ಕಲ್ಪಿಸಲಾಗಿದೆ.


ವಿಜೇತರಿಗೆ ಪ್ರಥಮ ಬಹುಮಾನವಾಗಿರೂ. 3000 , ದ್ವಿತೀಯ ಬಹುಮಾನ ರೂ.2000 ಹಾಗೂ ತೃತೀಯ ಬಹುಮಾನ ರೂ.1000 ದೊರೆಯಲಿದೆ. ಅಲ್ಲದೇ ಭಾಗವಹಿಸುವ ಎಲ್ಲಾ ಮುದ್ದು ಮಕ್ಕಳಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಲಾಗುವುದು. ಎರಡೂ ವಿಭಾಗಗಳಿಗೂ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುತ್ತದೆ, ಸ್ಪರ್ಧೆಗೆ ಹಾಜರಾಗುವ ಸಂದರ್ಭದಲ್ಲಿ ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಒಂದು ಭಾವಚಿತ್ರ ಕಡ್ಡಾಯವಾಗಿ ತರತಕ್ಕದ್ದು, ಹೆಸರನ್ನು ದಿ. 07 ರ ಒಳಗಡೆ ಕರೆಯ ಮೂಲಕ ನೋಂದಾಯಿಸಲು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿ ಮತ್ತು ಹೆಸರನ್ನು ನೋಂದಾಯಿಸಲು ದೂರವಾಣಿ ಸಂಖ್ಯೆ 8105556656 ಅಥವಾ 8590773486 ಕರೆ ಮಾಡುವಂತೆ ಅಕಾಡೆಮಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here